dtvkannada

ಉಡುಪಿ : ಕಾಂಟ್ರಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ಪರಿಗಣಿಸಿದ್ದು ಹೆಚ್ಚಿನ ತನಿಖೆಯ ಉದ್ದೇಶಕ್ಕಾಗಿ ಎರಡು ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಿ ಉಡುಪಿ ಎಸ್ ಆದೇಶ ಹೊರಡಿಸಿದ್ದಾರೆ.

ಮಲ್ಪೆ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿ ತನಿಖೆ ನಡೆಸಲು 2 ತಂಡಗಳ ರಚನೆ ಮಾಡಲಾಗಿದೆ ಎಂದು ಉಡುಪಿ ಎಸ್ ಪಿ ವಿಷ್ಣುವರ್ಧನ್ ಹೇಳಿಕೆ ನೀಡಿದ್ದಾರೆ.

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಂತೋಷ್ ಕೊಲೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪರ ಹೆಸರು ತಳಕು ಹಾಕಲಾಗಿದ್ದು , 40 ಶೇಕಡ ಕಮಿಷನ್ ಸಚಿವರು ಡಿಮಾಂಡ್ ಮಾಡಿದ್ದರು ಎಂಬ ಆರೋಪಗಳು ಬಲವಾಗಿ ಕೇಳಿ ಬಂದಿತ್ತು.

ಸಂತೋಷ್ ಸಾಯುವ ಮುನ್ನ ಕಳುಹಿಸಿದ ವಾಟ್ಸಾಪ್ ಸಂದೇಶದಲ್ಲಿ ಸಚಿವ ಈಶ್ವರಪ್ಪ ಹೆಸರು ನಮೂದಾಗಿದ್ದರಿಂದ ಈಶ್ವರಪ್ಪ ಮೇಲೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!