ಕೇರಳ: ಪಾಲಕ್ಕಾಡ್‌ನ ಎಲಪ್ಪುಲ್ಲಿಯಲ್ಲಿ ಎಸ್‌ಡಿಪಿಐ ಮುಖಂಡ ಜುಬೇರ್ ಹತ್ಯೆಗೈದ ಕಾರು ಈ ಹಿಂದೆ ಹತ್ಯೆಗೀಡಾದ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಯ್‌ಗೆ ಸೇರಿದ್ದು ಎಂಬುದು ದೃಢೀಕರಣವಾಗಿದೆ. ಈ ಬಗ್ಗೆ ಪಾಲಕ್ಕಾಡ್ ಕಸಬಾ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಗಾರರು ಇಯಾನ್ ಮತ್ತು ವ್ಯಾಗ್ನರ್ ಕಾರುಗಳಲ್ಲಿ ಬಂದಿದ್ದರು. ಘಟನೆಯ ನಂತರ ದುಷ್ಕರ್ಮಿಗಳು ಸಂಜಯ್ ರವರ ಕಾರನ್ನು ಸ್ಥಳದಲ್ಲೇ ಬಿಟ್ಟು ವ್ಯಾಗ್ನರ್‌ನಲ್ಲಿ ಪರಾರಿಯಾಗಿದ್ದಾರೆ.
ಈ ಹತ್ಯೆಯ ಹಿಂದೆ ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ. ಸಂಘರ್ಷದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಪೊಲೀಸ್ ತುಕಡಿ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಸೀದಿಯಲ್ಲಿ ಶುಕ್ರವಾರದ ನಮಾಜು ಮುಗಿಸಿ ಬೈಕ್‌ನಲ್ಲಿ ಕುಥಿಯಾತೋಡ್‌ನ ಜುಬೈರ್ ಮತ್ತು ಆತನ ತಂದೆ ಅಬೂಬಕ್ಕರ್ ವಾಪಾಸಾಗುತ್ತಿದ್ದರು. ಅಷ್ಟರಲ್ಲಿ ಕಾರಿನಲ್ಲಿ ಬಂದ ಗುಂಪು ಇಬ್ಬರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ನಂತರ ತಂದೆಯ ಎದುರೇ ಜುಬೈರ್‌ನನ್ನು ಕೊಂದು ಹಾಕಿದ್ದಾರೆ.
ಬೈಕ್’ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಬಿದ್ದಿದ್ದಾರೆ.
ಕೂಡಲೇ ಮತ್ತೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಜುಬೈರ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಜುಬೇರ್‌ನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಜುಬೈರ್ ಎಸ್‌ಡಿಪಿಐ ಪಾಲಕ್ಕಾಡ್ ಜಿಲ್ಲಾ ಸಮಿತಿಯ ಸದಸ್ಯರಾಗಿದ್ದರು. ಜುಬೇರ್ ಅವರ ತಂದೆ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜುಬೇರ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.