dtvkannada

ರಾಯಚೂರು: ರಸ್ತೆ ದಾಟುತ್ತಿದ್ದಾಗ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿದ್ದ ದುರ್ಘಟನೆ ಮಂಗಳೂರಿನಲ್ಲಿ ಸಂಭವಿಸಿತ್ತು. ಈ ಘಟನೆಯಿಂದ ಪತಿ ಸಾವಿನ ಸುದ್ದಿ ತಿಳಿದ ಪತ್ನಿ ತನ್ನ ಮಗುವನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಮಂಗಳೂರಿನ ಕುಂಟಿಕಾನ ಬಳಿ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಗಂಗಾಧರ ಬಿ. ಕಮ್ಮಾರ ಮೃತಪಟ್ಟಿದ್ದರು. ಪತಿ ಸಾವಿನ ಸುದ್ದಿ ಕೇಳಿ 6 ತಿಂಗಳ ಮಗ ಅಭಿರಾಮ್ ಹತ್ಯೆ ಮಾಡಿ ಗಂಗಾಧರ ಪತ್ನಿ ಶ್ರುತಿ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಘಟನೆ ನಡೆದಿದೆ.

ಉಡುಪಿಯಲ್ಲಿ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಗಂಗಾರಾಮ್ ಮಂಗಳೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದರು. ವಿಷಯ ತಿಳಿದು 6 ತಿಂಗಳ ಮಗ ಅಭಿರಾಮ್ ಕೊಂದು, ಬಳಿಕ ಪತ್ನಿ ಶೃತಿ ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಲಿಂಗಸುಗೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!