dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಶೇಷ ಆರ್ಥಿಕ ವಲಯ (Special Economic Zone – SEZ) ವ್ಯಾಪ್ತಿಯ ಮೀನಿನ ಕಾರ್ಖಾನೆಯಲ್ಲಿ ಮೀನು ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸುವಾಗ ಅವಘಡ ಸಂಭವಿಸಿದೆ.

ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ (19) ಈ ಮೂವರು ನಿನ್ನೆ ರಾತ್ರಿಯೇ ಮೃತಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಶರಪ್ ಅಲಿ, ಮೀರಾದುಲ್ಲಾ ಇಸ್ಲಾಂ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಎಂದಿನಂತೆ ಮೀನು ಶುದ್ದೀಕರಣಗೊಳಿಸುವ ಬೃಹತ್ ಟ್ಯಾಂಕಿಗೆ ಇಳಿದ ಓರ್ವ ಅಸ್ವಸ್ಥಗೊಂಡ. ತಕ್ಷಣ ಆತನನ್ನು ರಕ್ಷಿಸಲು ಇಳಿದ 8 ಮಂದಿ ಕಾರ್ಮಿಕರು ತೀವ್ರ ಅಸ್ವಸ್ಥಗೊಂಡಿದ್ದಾರೆ.
ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್‌ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಮೀನು ಸಂಸ್ಕರಣ ಫ್ಯಾಕ್ಟರಿಯನ್ನು ಮುಚ್ಚಲಾಗಿದೆ.

ಇಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಬಗ್ಗೆ ಕಂಪನಿಯ ಬಗ್ಗೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಅನ್ನು ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್, ಅಜಾದ್ ನಗರ ಉಳ್ಳಾಲ ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ. ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಕೆಲವೇ ಹೊತ್ತಿನಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

'; } else { echo "Sorry! You are Blocked from seeing the Ads"; } ?>

ಅಜನ್ ಆಲಿ, ಕರೀಬ್ಉಲ್ಲಾ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥ ಕಾರ್ಮಿಕರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


ಮೀನಿನ ತ್ಯಾಜ್ಯವನ್ನು ಸಂಸ್ಕರಿಸುವಾಗ ಬಳಕೆ ಮಾಡುವ ವಿಷಾನಿಲ ಸೋರಿಕೆಯಿಂದ ಈ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿರ್ದಿಷ್ಟವಾಗಿ ಇಂಥದ್ದೇ ಕಾರಣ ಎಂದು ಯಾರೂ ಅಧಿಕೃತವಾಗಿ ಹೇಳುತ್ತಿಲ್ಲ. ಸಮರ್ಪಕ ತನಿಖೆ ನಡೆದು, ಸಂಪೂರ್ಣ ಮಾಹಿತಿ ಹೊರಬರಬೇಕಿದೆ. ಮುಂದಿನ ದಿನಗಳಲ್ಲಿ ಇಂಥ ಅನಾಹುತಗಳು ಮರುಕಳಿಸದಿರಲು ಇತರ ಕಾರ್ಖಾನೆಗಳಲ್ಲಿಯೂ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ. ಸದ್ಯಕ್ಕೆ ಕಾರ್ಖಾನೆ ಸ್ಥಗಿತಗೊಂಡಿದ್ದು, ಯಾವುದೇ ಕೆಲಸ ನಡೆಸಬೇಡಿ ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!