';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಈಶ್ವರಮಂಗಳ ಪಾಳ್ಯತ್ತಡ್ಕ ಜಮಾಅತ್’ಗೆ ಒಳಪಟ್ಟ ಮುಗುಳಿ ಮಹಮ್ಮದ್ ರವರ ಮಗ ಉಮ್ಮರ್ ಸಿ.ಎಚ್ (28) ರವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಬೆಂಗಳೂರಿನಿಂದ ಬಸ್ಸಿನಲ್ಲಿ ಹೊರಟು ಇಂದು ಬೆಳಗ್ಗೆಯಷ್ಟೇ ಊರಿಗೆ ತಲುಪಿದ್ದರು.
ಮನೆಗೆ ಬಂದು ತಲುಪುವಷ್ಟರಲ್ಲಿ ಡಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡುಹೋಗಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಾಗ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದು ಬಂದಿದೆ.
ಮೃತರ ಗೌರವಾರ್ಥವಾಗಿ ಹಲವು ಸಂಘಟನೆಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ತಂದೆ-ತಾಯಿ, ಸಹೋದರ-ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.