ಭೋಪಾಲ್: ತನ್ನ ತಂದೆ ಮೊಬೈಲ್ ರಿಚಾರ್ಜ್ ಮಾಡಿಸಿಕೊಡಲಿಲ್ಲವೆಂಬ ಕಾರಣಕ್ಕೆ 14 ವರ್ಷದ ಹುಡುಗನೊಬ್ಬ, ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಜಬ್ಬಲ್‌ಪುರ್‌ನಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ಅಂತೆಯೇ ಜಬ್ಬಲ್‌ಪುರ್‌ನ ಹುಡುಗನೊಬ್ಬ ಮೊಬೈಲ್ ವ್ಯಸನಿಯಾಗಿದ್ದು, ಡೇಟಾ ಅವಧಿ ಮುಗಿದ ಬಳಿಕ ರಿಚಾರ್ಜ್ ಮಾಡಿಸಿಕೊಡುವಂತೆ ತಂದೆಯನ್ನು ಒತ್ತಾಯಿಸಿದ್ದಾನೆ. ನಿರಂತರ ಬೇಡಿಕೆಯ ಹೊರತಾಗಿಯೂ ತನ್ನ ತಂದೆ ರೀಚಾರ್ಜ್ ಮಾಡಿಸಿರಲಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.