dtvkannada

ಮಂಗಳೂರು: ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾಗಿದೆ ಎಂಬ ಸಂಶಯದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣ ಸಂಧರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಲಾಗಿತ್ತು. ಈ ವೇಳೆ ಹಿಂದೂ ಸಂಘಟಕರು ಇದು ಹಿಂದೂಗಳ ದೇವಲಾಯ ಇದರಲ್ಲಿ ಸಂಶಯಗಳಿವೆ ಅಧಿಕಾರಿಗಳು ಇದರ ಬಗ್ಗೆ ತನಿಖೆಗಳು ನಡೆಸಬೇಕು ತದನಂತರವೇ ಕಾಮಾಗಾರಿಗೆ ಅವಕಾಶ ನೀಡಬೇಕು ಅದಲ್ಲದೇ ಯಾವುದೇ ಕಾರಣಕ್ಕೂ ಸಂಘರ್ಷಕ್ಕೆ ಅವಕಾಶ ಉಂಟು ಮಾಡುವುದು ಬೇಡ ಎಂದು ತಿಳಿಸಿದ್ದರು.

ಈ ಬಗ್ಗೆ ಧನಂಜಯ ಎಂಬವರು ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಸದ್ರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಮತ್ತು ಆ ಕಟ್ಟಡದ ಒಳಗಡೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆಯೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!