ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅನ್ಯಕೋಮಿನ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ಯಾರಮೆಡಿಕಲ್ ವಿದ್ಯಾರ್ಥಿನಿಯೊರ್ವರಿಗೆ ಕಾವು ಮಾಡನ್ನೂರು ನಿವಾಸಿ ಸತ್ತಾರ್ ಎಂಬಾತ ಕಿರುಕುಳ ನೀಡದ್ದಾನೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.