';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೀದರ್: ಪುತ್ರನಿಗೆ ಈಜು ಕಲಿಸಲು ಹೋಗಿ ತಂದೆ ಹಾಗೂ ಮಗ ಇಬ್ಬರೂ ನೀರು ಪಾಲಾದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.
ಸೂರ್ಯಕಾಂತ್ ಚಂದ್ರಾಶಾ (46) ಹಾಗೂ ಆತನ ಮಗ ಅಭಿಷೇಕ್ (16) ಮೃತಪಟ್ಟ ದುರ್ದೈವಿಗಳು. ಬಾವಿಯಲ್ಲಿ ಅಭಿಷೇಕ್ ನಿಗೆ ಈಜು ಕಲಿಸಲು ಹೋಗಿದ್ದರು. ಈ ವೇಳೆ ಸೂರ್ಯಕಾಂತ್ ಮೊದಲು ಮಗ ಅಭಿಷೇಕ್ ನನ್ನು ನೀರಿಗೆ ಇಳಿಸಿದ್ದು, ಆತ ಬಾವಿಯ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ
ಆಗ ತಂದೆ ಸೂರ್ಯಕಾಂತ, ಮಗ ಅಭಿಷೇಕ್‍ನನ್ನು ರಕ್ಷಣೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ತಂದೆ ಮತ್ತು ಮಗ ಕೆಸರಿನಲ್ಲಿ ಸಿಲಕಿ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮುಡಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.