';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಾದಾನ್ಯ (09) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಏ.25ರಂದು ಮಕ್ಕಳಿಗೆ ಬೇಸಿಗೆ ರಜೆಯಾದ್ದರಿಂದ ಪ್ರಾದಾನ್ಯ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಎದುರುಗಡೆ ಮರಕ್ಕೆ ಸೀರೆಯಿಂದ ಜೋಕಾಲಿ ಕಟ್ಟಿ ಕುಳಿತು ಆಟ ಆಡುತ್ತಿರುವಾಗ ಸನಿಹದಲ್ಲಿ ನಿಲ್ಲಿಸಿದ್ದ ಕಾರನ್ನು ಸಂತೋಷ ಎಂಬಾತ ನಿರ್ಲಕ್ಷತನದಿಂದ ಅತೀ ವೇಗವಾಗಿ ಚಲಾಯಿಸಿ ಜೋಕಾಲಿ ಆಡುತ್ತಿದ್ದ ಪ್ರಾದಾನ್ಯಳಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಆಕೆಯು ಅಂಗಾತನೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.