dtvkannada

ಮಂಗಳೂರು: ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಇಂದು ಸಂಜೆ ಸಂಭವಿಸಿದೆ.

Live Tv

ಕೊಲೆಯಾದ ಯುವಕನನ್ನು ರಾಹುಲ್ (26) ಎಂದು ಗುರುತಿಸಲಾಗಿದೆ. ರಾಹುಲ್ ರೌಡಿಶೀಟರ್ ಎನ್ನಲಾಗಿದ್ದು ಹಲವು ಪ್ರಕರಣಗಳು ಈತನ ಮೇಲಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಹಳೆ ದ್ವೇಷವೇ ಕೊಲೆ ಕಾರಣ ಎಂದು ಶಂಕಿಸಲಾಗಿದ್ದು ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್, ಡಿಪಿಪಿ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಸಂಘಟನೆಯಲ್ಲೂ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯನಿಗೆ ಹಲ್ಲೆ ನಡೆಸಿದ್ದ.
ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ ಎನ್ನಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!