dtvkannada

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ,
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ಮಾಜೀ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿ ಯವರ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ. ಕೆ. ಹರೀಶ್‌ ಕುಮಾರ್‌ ರವರ ಶಿಫಾರಸಿನ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರರವರನ್ನು
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಮ್ ಅಹ್ಮದ್ ರವರು ನೇಮಕಗೊಳಿಸಿ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅಮಲ ರಾಮಚಂದ್ರ ರವರು ಕಾಂಗ್ರೆಸ್ ವಿದ್ಯಾರ್ಥಿ ಸಂಘಟಣೆಯ ಮೂಲಕ ರಾಜಕೀಯ ಪ್ರವೇಶಿಸಿದ್ದು, ಬಳಿಕ ಕೊಳ್ತಿಗೆ ವಲಯ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಯಾಗಿ,ಕೊಳ್ತಿಗೆ ಪಂಚಾಯತ್ ನ ಸದಸ್ಯರಾಗಿ, ಕೊಳ್ತಿಗೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಗಿ, ಕೊಳ್ತಿಗೆ ಸೌಹಾರ್ದ ಸಮಿತಿಯ ಕಾರ್ಯಾಧ್ಯಕ್ಷರಾಗಿ,ಕಾಂಗ್ರೆಸ್ ಸೇವಾದಲದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯಾಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿದವರಾಗಿರುತ್ತಾರೆ.

By dtv

Leave a Reply

Your email address will not be published. Required fields are marked *

error: Content is protected !!