ಪಾಟ್ನಾ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಮಗಳನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಈ ದಾರುಣ ಘಟನೆ ಗರ್ದಾನಿ ಬಾಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಹಗಲು ಹೊತ್ತಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರಾಜೀವ್ ಎಂದು ಗುರುತಿಸಲಾಗಿದೆ.
ಮೊದಲ ಪತ್ನಿಯ ಮರಣದ ನಂತರ ರಾಜೀವ್ ತನ್ನ ಅತ್ತಿಗೆಯನ್ನು ವಿವಾಹವಾಗಿದ್ದರು. ಆದರೆ, ಅವರ ಮದುವೆ ಹೆಚ್ಚು ಕಾಲ ಉಳಿಯಲಿಲ್ಲ. ಅತ್ತಿಗೆಯನ್ನು ಮದುವೆಯಾದ ಬಳಿಕ ಅವರು ಕೆಲವೇ ದಿನಗಳಲ್ಲಿ ಬೇರೆಯಾಗಿದ್ದರು.
ರಾಜೀವ್ ತನ್ನ ಪತ್ನಿ ಮತ್ತು ಮಗಳನ್ನು ಕೊಂದ ಕ್ಷಣದ ಮನಕಲಕುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ವ್ಯಕ್ತಿ ಮೊದಲು ತನ್ನ ಹೆಂಡತಿ ಮತ್ತು ಮಗಳನ್ನು ಕೊಲ್ಲುವುದನ್ನು ಕಾಣಬಹುದು. ನಂತರ ಅವನು ತನಗೆ ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ.
ಮಧ್ಯಾಹ್ನ 12.40ರ ಸುಮಾರಿಗೆ ಅನಿಸಾಬಾದ್‌ನ ಪೊಲೀಸ್ ಕಾಲೋನಿಯಲ್ಲಿ ತ್ರಿವಳಿ ಕೊಲೆ ನಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಸ್ಥಳದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯನ್ನು ಸ್ಕ್ಯಾನ್ ಮಾಡಲಾಗಿದೆ. ತನಿಖೆಯ ನಂತರ, ರಾಜೀವ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿ ತನ್ನನ್ನು ಕೊಲ್ಲುವ ಮೊದಲು ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ ಎಂದು ಪಾಟ್ನಾ ಎಸ್‌ಎಸ್‌ಪಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.
ಈ ಘಟನೆಯು ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕವನ್ನು ಉಂಟುಮಾಡಿದೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಹಳೆಯ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.