ಪಾಟ್ನಾ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ ಅಮಾನತು ಆದ ಘಟನೆ ಬಿಹಾರದಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೊರಡಿಸಿದ ಆದೇಶದಂತೆ ಹಿರಿಯ ಪೊಲೀಸ್ ಅಧಿಕಾರಿ ಶಶಿಭೂಷಣ್ ಸಿನ್ಹಾ ಅಮಾನತು ಆಗಿದ್ದಾರೆಂದು ತಿಳಿದು ಬಂದಿದೆ.
ಇವರು ದೂರು ನೀಡಲು ಬರುತ್ತಿದ್ದ ಮಹಿಳೆಯರಿಂದ ಶರ್ಟ್ ಬಿಚ್ಚಿ ಮಸಾಜ್ ಮಾಡಿಸಿಕೊಳ್ಳುವ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.
ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಅಮಾನತು ಆದೇಶ ಕೂಡ ಹೊರಡಿಸಲಾಗಿದೆ ಎಂದು ವರದಿಯಾಗಿದೆ.