ಪುತ್ತೂರು: ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ಅರಿಯಡ್ಕ ನಿವಾಸಿ ಸಿನಾನ್(18) ಎಂಬ ಯುವಕನ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದು, ಇದೀಗ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಬಪ್ಪಳಿಗೆ ಮಸೀದಿಯಲ್ಲಿ ಅಂತಿಮ ವಿಧಿ ವಿಧಾನಗಳನ್ನು ನಿರ್ವಹಿಸಲು ಕರೆ ತರಲಾಗಿದೆ.

ಸಂಜೆ ಸುಮಾರು 7:00 ಗಂಟೆಗೆ ಯುವಕನ ಮೃತದೇಹ ಮಸೀದಿಯಿಂದ ಅರಿಯಡ್ಕದ ಮನೆಗೆ ತಲುಪಲಿದೆ ಎಂದು ತಿಳಿದು ಬಂದಿದೆ.