dtvkannada

ವಿಟ್ಲ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೈದ ಪ್ರಕರಣ ಇಂದು ಬೆಳಗ್ಗೆ ನಡೆದಿದೆ
ಇದೀಗ ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಈ ಸಂಬಂಧ ಅನ್ಯಕೋಮಿನ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.
ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ಇಂದು ಮಧ್ಯಾಹ್ನ ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇಂದು ಮನೆಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಈಕೆಗೆ ಸ್ಥಳೀಯ ನಿವಾಸಿ ಸಾಹುಲ್ ಹಮೀದ್ ಎಂಬಾತ ನಿರಂತರ ಕಿರುಕುಳ ನೀಡುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಯುವಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಬೆಳ್ಳಾರೆ ಪಂಜ ನಿವಾಸಿ ಸಂಜೀವ ಎಂಬವರ ಪುತ್ರಿ ಆತ್ಮಿಕಾ(14) ತನ್ನ ಕುಟುಂಬದೊಂದಿಗೆ ಕನ್ಯಾನದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸಂಬಂಧ ಆರೋಪಿಯ ವಿರುದ್ಧ ಸೂಕ್ತ ಕ್ರಮಕ್ಕಾಗಿ ಬಜರಂಗದಳ ವಿಟ್ಲ ಪ್ರಖಂಡ ಒತ್ತಾಯಿಸಿದೆ.

ಘಟನೆ ಹಿನ್ನೆಲೆ:
ವಿದ್ಯಾರ್ಥಿನಿ ಸಾಲೆತ್ತೂರಿನ ತಲೆಕ್ಕಿ ಎಂಬಲ್ಲಿಯ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನನ್ನು ಪ್ರೀತಿಸುತ್ತಿದ್ದು, ಈ ವಿಚಾರ ಮನೆಯವರಿಗೆ ಗೊತ್ತಾಗಿದೆ. ಬಳಿಕ ಮಗಳ ಮೊಬೈಲ್ ತೆಗೆದಿರಿಸಿ ಆಕೆಗೆ ಬುದ್ಧಿವಾದ ಹೇಳಿದ್ದು ಸಾಹುಲ್ ಹಮೀದ್ ಹಾಗೂ ಆತನ ಅಣ್ಣನನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಆತನಿಗೆ ಮಗಳ ಸಹವಾಸಕ್ಕೆ ಬರಬೇಡ ಎಂದು ಎಚ್ಚರಿಕೆ ನೀಡಿದ್ದರು.

ಆದರೂ ಕೂಡ ಸಾಹುಲ್ ಹಮೀದ್ ಪದೇ ಪದೇ ಮನೆಯಲ್ಲಿ ಬೇರೆ ಯಾರೂ ಇಲ್ಲದ ಸಮಯ ಆಕೆಯ ಮನೆಗೆ ಬಂದು ಆಕೆಯನ್ನು ಭೇಟಿಯಾಗಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನೀನು ನಿನ್ನ ತಂದೆ-ತಾಯಿಯನ್ನು ಬಿಟ್ಟು ನನ್ನೊಂದಿಗೆ ನೀನು ಬಾ. ನೀನು ಬರುವುದಿಲ್ಲವಾದರೆ ಸಾಯಿ ಎಂದು ಸಾಹುಲ್ ಹಮೀದ ಯಾನೆ ಕುಟ್ಟ ಹೇಳಿರುವುದನ್ನು ಈಕೆ ತನ್ನ ತಂದೆ ಹಾಗೂ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆತನ ಮಾತಿನಿಂದ ಮನನೊಂದು ಈ ಕೃತ್ಯ ಎಸೆಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!