ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಅಚಾನಕ್ ಆಗಿ ಸೀರೆಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಸಾಣೂರು ಕುಜಮಾರು ಮನೆಯ ಸುಮತಿ ಶೆಟ್ಟಿ(71) ಮೃತ ದುರ್ದೈವಿ.
ಮನೆಯೊಳಗಿದ್ದ ತಾಯಿ ಏಕಾಏಕಿ ಬೊಬ್ಬೆ ಹಾಕುತ್ತಿರುವಾಗ ಮಗ ದಿಲೀಪ್ ಶೆಟ್ಟಿ ಅಡುಗೆ ಕೋಣೆಗೆ ಓಡಿ ಬಂದು ನೀರನ್ನು ಪಸರಿಸಿ ಬೆಂಕಿ ನಂದಿಸಿದ್ದರು. ನಂತರ ಅವರನ್ನು ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಗುಣಮುಖವಾಗಿ ಮನೆಗೆ ಬಂದಿದ್ದ ಸುಮತಿ ಶೆಟ್ಟಿ ಅವರ ದೇಹದಲ್ಲಿ ಗಾಯ ಮತ್ತಷ್ಟು ಉಲ್ಬಣಿಸಿಕೊಂಡಿದ್ದು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಏನೂ ಪ್ರಯೋಜನವಾಗಿಲ್ಲ.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದದಾಗ ಅವರ ಆರೋಗ್ಯ ಸ್ಥಿತಿ ಏರುಪೇರಾಗಿದ್ದು ಅಲ್ಲಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.