';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಅಪ್ರಾಪ್ತೆಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಹಾಡುಹಗಲೇ ನಡೆದಿದೆ.
ಆರೋಪಿಯನ್ನು ನೌಫಲ್ (28) ಎಂದು ಗುರುತಿಸಲಾಗಿದೆ. ಗದಗ ಮೂಲದ ಹಿಂದೂ ಅಪ್ರಾಪ್ತ ಬಾಲಕಿ ಬಸ್ ನಿಲ್ದಾಣದ ಬಳಿ ಇದ್ದ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ನೌಫಲ್ ಎಂಬಾತ ಬಾಲಕಿಯ ಬಳಿ ಬಂದು ಹತ್ತು ನಿಮಿಷ ನನ್ನ ಜೊತೆ ಬರ್ತಿಯಾ, ನಾನು ನಿನಗೆ ಹಣ ಕೊಡುತ್ತೇನೆ ಎಂದು ಅಮಿಷವೊಡ್ಡಿ ಬಾಲಕಿಯನ್ನು ತನ್ನ ಜೊತೆ ಬರುವಂತೆ ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಾಲಕಿ ಈ ವಿಚಾರವನ್ನು ತನ್ನ ಪೋಷಕರ ಬಳಿ ತಿಳಿಸಿದ ಹಿನ್ನೆಲೆಯಲ್ಲಿ ಪೊಷಕರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಪೊಲೀಸರು ಆರೋಪಿ ನೌಫಲ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.