ಬೆಳ್ತಂಗಡಿ : ಬಿಜೆಪಿ ಮುಖಂಡರೊಬ್ಬರು ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಡಾ. ನರೇಂದ್ರ ಕುಮಾರ್(45) ಎಂದು ಗುರುತಿಸಲಾಗಿದೆ.
ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಗಿದ್ದ ಡಾ. ನರೇಂದ್ರ ಕುಮಾರ್ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿದ್ದರು. ನಿನ್ನೆ ಧರ್ಮಸ್ಥಳದ ಖಾಸಗಿ ಗೆಸ್ಟ್ ಹೌಸ್‌ನಲ್ಲಿ ರೂಂ ಮಾಡಿದ್ದರು.
ಇಂದು ಬೆಳಗ್ಗೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿದ್ದು ವಾಹನದಲ್ಲಿ ಕುಳ್ಳಿರಿಸಿ ನೇತ್ರಾವತಿ ಬಳಿ ಬರುತ್ತಿದ್ದಾಗ ವಾಹನದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ. ನರೇಂದ್ರ ಕುಮಾರ್ ಅವರ ಪತ್ನಿ ಸಂದರ್ಶಿನಿ ಶ್ರೀ ಜ್ಞಾನಕ್ಷಿ ವಿದ್ಯಾ ಕೇಂದ್ರದಲ್ಲಿ ಪ್ರಾಂಶುಪಾಲರಾಗಿದ್ದಾರೆ.