ಮಂಗಳೂರು : ಈರುಳ್ಳಿ ಸಾಗಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾ.ಹೆ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಘಟನೆ ನಡೆದಿದೆ.

ದುರ್ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಗಾಯಗೊಂಡಿದ್ದು, ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಕಡೆಯಿಂದ ಕೇರಳ ಕಡೆಗೆ ಈರುಳ್ಳಿ ಸಾಗಾಟ ನಡೆಸುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ನಾಗುರಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತೆರವು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆಂದು ವರದಿಯಾಗಿದೆ.