ಉಳ್ಳಾಲ: ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಂಪಲದ ಚೇತನ ನಗರ ನಿವಾಸಿ ಮಹಿಳೆಯ ಗಂಡ ಜೋಸೆಫ್ ಫ್ರಾನ್ಸಿಸ್ (54) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣದಲ್ಲಿ ಕೊಲೆಯಾದ ಮಹಿಳೆ ಕೇರಳದ ಕೊಚ್ಚಿ ನಿವಾಸಿ ಜೋಸೆಫ್ ಎಂಬವರ ಪುತ್ರಿ ಶೈಮಾ(44) ಎಂದು ತಿಳಿದು ಬಂದಿದೆ.
ಮೇ.11 ರಂದು ದಂಪತಿ ನಡುವೆ ವಾಗ್ವಾದ ನಡೆದು, ಪತಿ ಜೋಸೆಫ್ ಬಲವಾದ ಆಯುಧದಿಂದ ಪತ್ನಿ ತಲೆಗೆ ಹೊಡೆದಿದ್ದರೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಶೈಮಾ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶೈಮಾ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಿಂದ ಬಂದ ವರದಿಯಂತೆ ಉಳ್ಳಾಲ ಪೊಲೀಸರು ಆರಂಭದಲ್ಲಿ ಅನುಮಾನಾಸ್ಪದ ಪ್ರಕರಣ ದಾಖಲಿಸಿಕೊಂಡಿದ್ದರು.
ಬಳಿಕ ಆಸ್ಪತ್ರೆಯಲ್ಲಿ ನಡೆದ ಶವಮಹಜರು ಪರೀಕ್ಷೆಯಲ್ಲಿ ಮಹಿಳೆ ತಲೆಗೆ ಬಡಿದು ಕೊಲೆ ನಡೆಸಿರುವುದು ಸಾಬೀತಾಗಿದೆ.
ತಕ್ಷ ಣ ಉಳ್ಳಾಲ ಪೊಲೀಸರು ಆರೋಪಿ ಪತಿಯನ್ನು ವಿಚಾರಣೆ ನಡೆಸಿದಾಗ ಕೊಲೆಕೃತ್ಯ ಬಯಲಾಗಿದೆಯೆಂದು ವರದಿಯಾಗಿದೆ.
ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಫ್ರೈಮರಿ ವಿದ್ಯಾರ್ಥಿಗಳಾಗಿದ್ದಾರೆ.
ಶವಮಹಜರು ಪರೀಕ್ಷೆಯಲ್ಲಿ ಕೂಡಾ ಮಹಿಳೆ ತಲೆಗೆ ಬಲವಾದ ಗಾಯವಾಗಿರುವ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ಎಂಬುದು ಸಾಬೀತಾಗಿದೆ.
ಪ್ರಕರಣ ಸಂಬಂಧಿಸಿ ಆರೋಪಿ ಪತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.