';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಮಿತ್ತೂರು ಬಳಿ ಇರುವ ಕಿರು ಸೇತುವೆ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ರೈಲು ಬಡಿದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕಬಕ ಸಮೀಪದಲ್ಲಿ ನಡೆದಿದೆ.
ಮೃತ ಪಟ್ಟ ದುರ್ದೈವಿ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ ಕಾರ್ತಿಕ್(24) ಎಂದು ತಿಳಿದು ಬಂದಿದೆ.
ಇವರು ಮಿತ್ತೂರಿನ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬಂದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸದ ನಿಮಿತ್ತ ಮಂಗಳೂರಿಗೆ ಬಂದಿದ್ದರು. ಬಸ್ ಸಿಗದ ಕಾರಣ ಮಿತ್ತೂರಿನ ಉಪ್ಪಿನಂಗಡಿ ಸಂಪರ್ಕಿಸಲು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
ಈ ಸಂದರ್ಭ ಅಪಘಾತ ಸಂಭವಿಸಿರಬಹುದೆಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಮಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.