dtvkannada

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಎಂದು ಗುರುತಿಸಲಾಗಿದೆ. ಈಕೆ ಅಳಿಕೆ ಗ್ರಾಮದ ನಿವಾಸಿಯಾಗಿದ್ದಾಳೆ.

ಅನ್ವಿತಾ ಜೇಸೀಸ್ ಶಾಲೆಯ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾಳೆ.

ಮೃತ ಯುವತಿ ತಂದೆ ವಿನಯ್‌ ಹೆಗ್ಡೆ ಹಾಗೂ ತಾಯಿ ಸಾಯಿ ಗೀತಾ ಅವರನ್ನು ಅಗಲಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

By dtv

Leave a Reply

Your email address will not be published. Required fields are marked *

error: Content is protected !!