ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ
ಘಟನೆ ಪುತ್ತೂರು ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿಯ ರಸ್ತೆಯಾಗಿ ತೆಂಕಿಲ ನೂಜಿ ಬಳಿ ಬೈಪಾಸ್ ರಸ್ತೆಗೆ ಸಂಪರ್ಕ ಮಾಡುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಡ್ಯೂಕ್ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.