dtvkannada

'; } else { echo "Sorry! You are Blocked from seeing the Ads"; } ?>

ಸೇಲಂ(ಮೇ.18): ಖಾಸಗಿ ಬಸ್’ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 30 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ಮಂಗಳವಾರ ಸಂಜೆ ನಡೆದಿದೆ. ಭೀಕರ ಅಪಘಾತದ ದೃಶ್ಯ ಬಸ್ ಒಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೇ.17ರ ಸಂಜೆ 30 ಪ್ರಯಾಣಿಕರನ್ನು ಹೊತ್ತು ಎಡಪ್ಪಾಯಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ವೊಂದು ತಿರುಚೆಂಗೋಡಿನಿಂದ ಬರುತ್ತಿದ್ದ ಇನ್ನೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ವಿರುದ್ಧ ಧಿಕ್ಕಿನಿಂದ ಬಂದ ಬಸ್ ಓವರ್ ಟೇಕ್ ಮಾಡುವ ಬರದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿದೆ.

'; } else { echo "Sorry! You are Blocked from seeing the Ads"; } ?>

ಡಿಕ್ಕಿಯಾದ ರಭಸಕ್ಕೆ ಬಸ್ ಡ್ರೈವರ್ ಸೀಟಿನಿಂದ ಎಗರಿ ಹೋಗಿದ್ದಾರೆ. ಇತ್ತ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಳಿಸಲಾಗಿದೆ. ಬಸ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಸಿಸಿಟಿವಿ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಗಾಯಾಳುಗಳನ್ನ ಸೇಲಂ ಮತ್ತು ಎಡಪ್ಪಾಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭೀಕರ ಅಪಘಾತದ ರಭಸಕ್ಕೆ ಒಂದು ಬಸ್ನ ಚಾಲಕ ಸೇರಿದಂತೆ ಅನೇಕ ಪ್ರಯಾಣಿಕರು ತೂರಿಕೊಂಡು ಹೊರಬಿದ್ದಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!