ಮಂಗಳೂರು: ಆದರ್ಶ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ತೋಡಾರು ಇಲ್ಲಿಯ 2021- 2022 ನೇ ವರ್ಷದ ಮೊದಲನೇ ಸಾಲಿನ S.S.L.C ಪರೀಕ್ಷೆಯಲ್ಲಿ 100% ಫಲಿತಾಂಶ ಬಂದಿದೆ.
ವಿದ್ಯಾರ್ಥಿನಿ ಫಾತಿಮಾ 596 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಗಳಿಸಿದ್ದು, ಹಾಗೂ ಇಕ್ಲಾಸ್ ಇಲಿಯಾಸ್ ಹಸನ್ 566 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಫಾತಿಮಾ ಮಹಸೂರ 550 ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನುಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.
ಒಟ್ಟು 18 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಕನ್ನಡ ವಿಷಯದಲ್ಲಿ 3 ವಿದ್ಯಾರ್ಥಿಗಳು ಹಾಗೂ ಹಿಂದಿ ವಿಷಯದಲ್ಲಿ 1 ವಿದ್ಯಾರ್ಥಿನಿ ನೂರರಲ್ಲಿ ನೂರು ಅಂಕಗಳನ್ನು ಪಡೆದಿರುವುದು ಶಾಲೆಗೆ ಹಾಗೂ ಊರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಸಂತಷ ವ್ಯಕ್ತಪಡಿಸಿದರು.
ತೇರ್ಗಡೆಗೊಂಡಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆದರ್ಶ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೋಡಾರು ಇದರ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಹೃದಯಸ್ಪರ್ಶಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.