dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಖ್ಯಾತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ (43) ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರನ್ನು ಗಳಿಸಿದ್ದರು.

'; } else { echo "Sorry! You are Blocked from seeing the Ads"; } ?>

ಅದಲ್ಲದೇ ದ.ಕ ಜಿಲ್ಲೆಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಮೊದಲ ಕ್ರೀಡಾಪಟುವಾಗಿದ್ದು 2007 ರಲ್ಲಿ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿದ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದು ಪ್ರಸ್ತುತ ಬ್ಯಾಂಕ್ ಆಫ್ ಬರೊಡಾ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿ ಕಾರ್ಯ ನಿರ್ವಹಿಸಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಇವರ ನಿಧನಕ್ಕೆ ಕ್ರೀಡಾ ಕ್ಷೇತ್ರದ ಗಣ್ಯರು ಮಾತ್ರವಲ್ಲದೇ ಇತರ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

'; } else { echo "Sorry! You are Blocked from seeing the Ads"; } ?>

ದಕ್ಷಿಣ ಕನ್ನಡ ಏಕಲವ್ಯ ಪ್ರಶಸ್ತಿ ಪಡೆದ ಪ್ರಥಮ ಕಬಡ್ಡಿ ಆಟಗಾರ: ೨೦೦೪ ರಲ್ಲಿ ಭಾರತ-ಬಾಂಗ್ಲಾ ಕಬಡ್ಡಿ ಪಂದ್ಯಾಟದಲ್ಲಿ ೫ ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಉದಯ ಚೌಟರವರದ್ದು. ೨೦ ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ ೧೦೦ ಕ್ಕೂ ಅಧಿಕ ಹಾಗೂ ರಾಜ್ಯ ಮಟ್ಟದಲ್ಲಿ ೩೦೦ ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!