dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಗಾಂಜಾ ಸರಬರಾಜು ಮಾಡುತ್ತಿದ್ದ ಯುವಕರನ್ನು ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತರನ್ನು ಮುವಾಝ್, ರಾಝಿಕ್ ಹಾಗೂ ಶಫೀಕ್ ಎಂದು ತಿಳಿದು ಬಂದಿದೆ.
ವೀರಮಂಗಲ ರೈಲ್ವೇ ಹಳಿಗಳ ಸಮೀಪ ಬ್ಯಾಗ್ ಹಿಡಿದುಕೊಂಡು ನಿಂತಿದ್ದ ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಕೋಚಕಟ್ಟೆ ಉಮ್ಮರಬ್ಬ ಎಂಬವರ ಪುತ್ರ ಶಫೀಕ್ ಕೆ.ವಿ(25) ಮತ್ತು ಕುಂತೂರು ಎರ್ಮಲ ನಿವಾಸಿ ಅಬ್ದುಲ್ಲ ಎಂಬವರ ಪುತ್ರ ರಾಝೀಕ್(28)ರವರನ್ನು ವಿಚಾರಿಸಿದ ಪೊಲೀಸರಿಗೆ, ಅವರ ಬಳಿ ಗಾಂಜಾ ಇರುವುದು ಬೆಳಕಿಗೆ ಬಂದಿದೆ.

'; } else { echo "Sorry! You are Blocked from seeing the Ads"; } ?>

ಬಂಧಿತ ಆರೋಪಿಗಳ ವಿಚಾರಣೆ ವೇಳೆ ಗಾಂಜಾ ಸರಬರಾಜುದಾರ ಆರೋಪಿ ವಿಟ್ಲ ಕುಂಡಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರ ಮಹಮ್ಮದ್ ಮುವಾಝ್(30) ಎಂಬವರನ್ನು ಮೇ 22ರಂದು ಸಂಜೆ ವೇಳೆ ಕೆದಿಲ ಗ್ರಾಮದ ಪೇರಮೊಗ್ರು ಎಂಬಲ್ಲಿ ಬಂಧಿಸಿ ಆತನಿಂದ ಪಿಸ್ತೂಲ್, ಸಜೀವ ಗುಂಡು, ಕಾರು, ಗಾಂಜಾ ಸೇರಿದಂತೆ ಸುಮಾರು ರೂ. 5.86 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ

ಪಿಸ್ತೂಲ್, ಸಜೀವ ಗುಂಡು, ಕಾರು, ಗಾಂಜಾ ಸೇರಿದಂತೆ ರೂ. ೫.೮೬ ಲಕ್ಷದ ಸೊತ್ತು ವಶ:
ಆರೋಪಿ ಮಹಮ್ಮದ್ ಮುವಾಝ್‘ನನ್ನು ಬಂಧಿಸಿದ ಬಳಿಕ ಆತನ ಪ್ಯಾಂಟ್ ಕಿಸೆಯನ್ನು ಪರಿಶೀಲಿಸಿದಾಗ ಪರವಾನಿಗೆ ಇಲ್ಲದ ರೂ. 50ಸಾವಿರ ಮೌಲ್ಯದ ಪಿಸ್ತೂಲ್ ಮತ್ತು ಎರಡು ಸಜೀವ ಗುಂಡುಗಳು, ಕಾರನ್ನು ಪರಿಶೀಲಿಸಿದಾಗ ಕಾರಿನ ಡಿಕ್ಕಿಯಲ್ಲಿ 2.25 ಕೆ.ಜಿ ಗಾಂಜಾ, ಪಾನ್ ಕಾರ್ಡ್, ಎಟಿಎಂ ಕಾರ್ಡ್, ಸ್ಟೀಲ್ ಸ್ಟಿಕ್, ರೂ. 5ಸಾವಿರ ಮೌಲ್ಯದ ಮೊಬೈಲ್ ಪೋನ್‌ಗಳು, ಪಿಸ್ತೂಲ್ ಮಾದರಿಯ ಸಿಗರ್ ಲೈಟ್, ಮಾತ್ರೆಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಹುಂಡೈ ಐ ೨೦ ಕಾರು ಸೇರಿದಂತೆ ಒಟ್ಟು ರೂ. 5,86,530 ಸೊತ್ತುಗಳನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ.

'; } else { echo "Sorry! You are Blocked from seeing the Ads"; } ?>

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮತ್ತು ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಅವರ ಮಾರ್ಗದರ್ಶನದಂತೆ ಎಸ್.ಐ ನಸ್ರೀನ್ ತಾಜ್ ಚಟ್ಟರಕಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!