ಹುಬ್ಬಳ್ಳಿ: ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದೆ. ಗಂಭೀ ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಬಸ್, ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಯಲ್ಲಿದ್ದ ಚಾಲಕ, ಕ್ಲೀನರ್, ಖಾಸಗಿ ಬಸ್ನಲ್ಲಿದ್ದ ನಾಲ್ವರು ಸೇರಿ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ನ್ಯಾಷನಲ್ ಟ್ರಾವೆಲ್ಸ್ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 25 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.
ಸಾವಿನ ಹೆದ್ದಾರಿ ಎಂದೇ ಬಿಂಬಿತಗೊಂಡಿರೋ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ದುರ್ಘಟನೆ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದ ನ್ಯಾಷನಲ್ ಟ್ರಾವೆಲ್ಸ್ ಬಸ್ ಗೆ ಧಾರವಾಡ ದ ಕಡೆ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಓವರ್ ಟೇಕ್ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ:- ಮೃತರೆಲ್ಲರೂ ಮಹಾರಾಷ್ಟ್ರಕ್ಕೆ ಸೇರಿದವರಾಗಿದ್ದಾರೆ. ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಲಾಭೂ ರಾಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಕಿಮ್ಸ್ ಆಸ್ಪತ್ರೆಗೂ ಭೇಟಿ ನೀಡಿದ ಲಾಭೂ ರಾಮ್, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಘಟನಾ ಸ್ಥಳದಲ್ಲಿಯೇ ಆರು ಜನ ಸಾವನ್ನಪ್ಪಿದ್ದಾರೆ. ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಗೆ ಅಪಘಾತವಾಗಿದೆ. ಅಪಘಾತ ಹೇಗಾಯಿತು ಎಂದು ಪರಿಶೀಲಿಸಲಾಗುತ್ತಿದೆ. ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಲಾಭೂ ರಾಮ್ ಮಾಹಿತಿ ನೀಡಿದ್ದಾರೆ.
ಗಾಯಾಳುಗಳು ಹೇಳಿದ್ದೇನು?
ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದೆವು. ಗಾಢ ನಿದ್ದೆಯಲ್ಲಿದ್ದಾಗ ಅಪಘಾತವಾಗಿದೆ. ಏನಾಯಿತು, ಯಾವ ರೀತಿ ಆಯಿತು ಎನ್ನೋದು ಒಂದೂ ಗೊತ್ತಿಲ್ಲ ಅಂತಾರೆ ಗಾಯಾಳುಗಳು. ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ರಸ್ತೆಯಲ್ಲಿ ಅಕ್ಕಿ ಮೂಟೆ ಚೆಲ್ಲಾಪಿಲ್ಲಿ:
ಲಾರಿಯಲ್ಲಿ ಅಕ್ಕಿ ಮೂಟೆ ಸಾಗಿಸಲಾಗುತ್ತಿತ್ತು. ಅಪಘಾತದ ಹಿನ್ನೆಲೆಯಲ್ಲಿ ರಸ್ತೆಯ ಬದಿ ಅಕ್ಕಿ ಮೂಟೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ತಕ್ಷಣ ಮೂಟೆಗಳನ್ನು ರಸ್ತೆ ಬದಿಗೆ ಪೊಲೀಸರು ಸ್ಥಳಾಂತರಿಸಿದ್ದಾರೆ. ಲಾರಿ ಹಾಗೂ ಬಸ್ ಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದಾರೆ.
ಮೊನ್ನೆಯಷ್ಟೇ ಒಂಬತ್ತು ಸಾವಾಗಿತ್ತು:
ಧಾರವಾಡ ಸಮೀಪ ಇತ್ತೀಚೆಗಷ್ಟೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂಬತ್ತು ಜನ ಸಾವನ್ನಪ್ಪಿದ್ದರು. ಕ್ರೂಷರ್ ಅಪಘಾತದಲ್ಲಿ ಒಂಬತ್ತು ಜನ ಸಾವಿಗೀಡಾಗಿ, ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಮದುವೆಯ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿತ್ತು. ಇದರ ಬೆನ್ನ ಹಿಂದೆಯೇ ಹುಬ್ಬಳ್ಳಿ ಬಳಿ ಅಪಘಾತ ಸಂಭವಿಸಿ 9 ಜನ ಸಾವಿಗೀಡಾಗಿದ್ದಾರೆ.