ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ 16ರಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ಅವರು ಹೇಳಿದ್ದು ಈಗಾಗಲೇ ಯಾದವ್ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ವೀಡಿಯೋವನ್ನು ANI ಪ್ರಕಟಿಸಿದೆ. ಹಿರಿಯ ನಾಯಕ ಪಿಲ್ ಸಿಬಲ್ ರಾಜೀನಾಮೆ ಕಾಂಗ್ರೆಸ್ ನಲ್ಲಿ ತಲ್ಲಣ ಮೂಡಿಸಿದೆ.

ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಂಗಳವಾರದಿಂದ ಆರಂಭವಾಗಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಎಸ್‌ಪಿ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿವೆ.