ಮಂಗಳೂರು: ಬಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಶುರುವಾಗಿದೆ. ಹಾಕೋರ್ಟ್ ತೀರ್ಪು ಬಳಿಕ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.
ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಆದೇಶ ಕಟ್ಟುನಿಟ್ಟು ಪಾಲನೆ ಮಾಡಿ ಇಲ್ಲದಿದ್ದರ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಎಂದು ಒತ್ತಾಯಿಸಿ ಕೆಲವು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನಲ್ಲಿ ಹೈಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್ ಧರಿಸಿ ಬರುತ್ತಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದೆವು. ಆದರೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಸಮವಸ್ತ್ರದ ಶಾಲು ತಲೆಗೆ ಹಾಕಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಇತ್ತೀಚೆಗೆ ವಿವಿ ಸಿಂಡಿಕೇಟ್ ಅದಕ್ಕೂ ಅವಕಾಶ ನೀಡಬಾರದು ಎಂದು ಹೇಳಿದ್ದರಿಂದ ಅದನ್ನು ಕೂಡ ಜಾರಿಗೊಳಿಸುತ್ತಿದ್ದೇವೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.