dtvkannada

'; } else { echo "Sorry! You are Blocked from seeing the Ads"; } ?>

ಭೂಪಾಲ್: ಊರಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ ಒಂದೇ ಅಂಗಡಿಯಲ್ಲಿ ಪಾನಿಪುರಿಯನ್ನು ತಿಂದಿದ್ದು ಅವರೆಲ್ಲರೂ ಸಮೀಪದ ವಿವಿಧ ಗ್ರಾಮಗಳಿಂದ ಖರೀದಿಗೆಂದು ಆಗಮಿಸಲಿದ್ದಾರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಕೆ.ಆರ್.ಶಾಕ್ಯಾ ಮಾತನಾಡಿ, ಪಾನಿಪುರಿ ತಿಂದ ಮಕ್ಕಳಿಗೆಲ್ಲರಿಗೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಅಸ್ವಸ್ತಗೊಂಡ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ ಮತ್ತು ತಿಂಡಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!