dtvkannada

ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ಇದೀಗ ನಡೆದಿದೆ.

ಮಂಗಳೂರು ಕಡೆಯಿಂದ ಮಡಂತ್ಯಾರು ಕಡೆ ಬರುತ್ತಿದ್ದ ಕಾರು ಮತ್ತು ಧರ್ಮಸ್ಥಳದಿಂದ ಮಂಗಳೂರು ಕಡೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಮಡಂತ್ಯಾರು ಕೀರ್ತಿ ಕ್ಯಾಟರಿಂಗ್ ಇದರ ಮಾಲಕ ರೋಷನ್ ಎಂಬವರಿಗೆ ಗಂಭೀರ ಸ್ವರೂಪದ
ಗಾಯಗಳಾಗಿವೆ.

ಗಾಯಾಲುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ.ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!