ಪುತ್ತೂರು: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಘಟನೆ ನಡೆದಿದ್ದು, ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.
ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.