ಪುತ್ತೂರು: ಹಿಂದೂ ಶ್ರದ್ಧಾಕೇಂದ್ರಕ್ಕೆ ಅನ್ಯಮತೀಯರಿಗೆ ಪ್ರವೇಶವಿಲ್ಲ. ಜೊತೆಗೆ ಹಿಂದೂಯೇತರರ ಆಟೋ, ಟ್ಯಾಕ್ಸಿ ಸೇರಿ ಎಲ್ಲಾ ವಾಹನಕ್ಕೆ ನಿರ್ಬಂಧ ಹೇರಿದ ಬೋರ್ಡ್ ಈಗ ವಿವಾದಕ್ಕೆ ಕಾರಣವಾಗಿದೆ. ಇತಿಹಾಸ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ಈ ಬೋರ್ಡ್ ಅಳವಡಿಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ವಿಶ್ವ ಹಿಂದೂ ಬಜರಂಗದಳ ಹಿಂದೂ ಜಾಗರಣ ವೇದಿಕೆ ಕೊಕ್ಕಡ ಹೆಸರಿನ ಪ್ರಕಟಣೆಯ ಬೋರ್ಡ್‌ನಲ್ಲಿ “ಹಿಂದುಗಳ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್‌ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡುಬಂದಿರುವುದರಿಂದ ಹಿಂದೂಯೇತರ ಜನರ ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ” ಎಂಬ ಬೋರ್ಡ್ ಅಳವಡಿಸಲಾಗಿದೆ.
ಸದ್ಯ ಈ ಬೋರ್ಡ್ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತು ಸೌತಡ್ಕ ಆಡಳಿತ ಮಂಡಳಿಯಲ್ಲಿ ಪ್ರಶ್ನಿಸಿದಾಗ ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಿದ್ದರಿಂದ ದೇವಸ್ಥಾನಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.