';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: ಸೈಕಲ್ ಮೇಲೆ ಜೆಸಿಬಿ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಕನ್ಯಾನ ಸಮೀಪದ ಕಣಿಯೂರು ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಣಿಯೂರು ಹಸೈನಾರ್ ಎಂಬವರ ಪುತ್ರ ಮಹಮ್ಮದ್ ಅಖಿಲ್(12) ಎಂದು ತಿಳಿದು ಬಂದಿದೆ.
ಇಂದು ಸಂಜೆ ಹಾಲಿನ ಡಿಪೋಗೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಜೆಸಿಬಿ ಚಾಲಕ ಗದಗ ಮೂಲದವನಾಗಿದ್ದು, ಪಾನಮತ್ತನಾಗಿದ್ದ ಎನ್ನಲಾಗಿದೆ. ಸ್ಥಳದಲ್ಲೇ ಮೃತಪಟ್ಟ ಬಾಲಕನ ಮೃತದೇಹ ಮತ್ತು ಸೈಕಲ್’ಅನ್ನು ಜೆಸಿಬಿ ಕೊಕ್ಕಿನಿಂದ ಪಕ್ಕಕ್ಕೆ ಸರಿಸಿ ಚಾಲಕ ಪರಾರಿಯಾಗಲು ಯತ್ನಿಸಿದ್ದಾನೆ.
ವಿಷಯ ತಿಳಿದ ಸಾರ್ವಜನಿಕರು ಪಾನಮತ್ತ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಬಾಲಕ ಕಣಿಯೂರು ಶಾಲೆಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಎನ್ನಲಾಗಿದೆ.