';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಡಿಕೇರಿ: ಇನೋವಾ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ಮಡಿಕೇರಿ ಸಮೀಪದ ಸಿಂಕೋನದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಇನ್ನೋವ ಕಾರು ಮತ್ತು ಸುಂಟ್ಟಿಕೊಪ್ಪ ಕಡೆಯಿಂದ ಬರುತ್ತಿದ್ದ ಬೈಕ್(KL13 AU1538) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಮೃತ ಯುವಕನನ್ನು ಕೇರಳದ ಕಣ್ಣೂರು ಕಾಡಾಂಚರ ನಿವಾಸಿ ಶಾನಿಲ್ (27) ಎಂದು ಗುರುತಿಸಲಾಗಿದೆ. ಸಹಸವಾರ ರಪ್ಸಾದ್ (26) ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. ಮೃತ ಶರೀರವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.