ಬೆಳ್ತಂಗಡಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್’ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು, ಹಿಂದಿನಿಂದ ಬಂದ ಲಾರಿಯ ಚಕ್ರಕ್ಕೆ ಸಿಲುಕಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತ ಬೈಕ್ ಸವಾರನನ್ನು ಚಾರ್ಮಾಡಿ ಮೇಗಿನಪೇಟೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್(22) ಎಂದು ತಿಳಿದು ಬಂದಿದೆ. ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಇನ್ನೊಂದು ಬೈಕ್’ನಲ್ಲಿದ್ದ ಸವಾರನಿಗೆ ಗಂಭೀರ ಗಾಯಗಳಾಗಿವೆ.
ಲಾರಿಯನ್ನು ಓವರ್’ಟೇಕ್ ಮಾಡುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆಸಯಲ್ಪಟ್ಚಿದ್ದು ಕೂಡಲೇ ಹಿಂದಿನಿಂದ ಬಂದ ಲಾರಿ ಆತನ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಹಸವಾರ ಹಾಗೂ ಇನ್ನೊಂದು ಬೈಕ್ ಸವಾರ ರಸ್ತೆಯ ಇನ್ನೊಂದು ಬದಿಗೆ ಎಸೆಯಲ್ಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಎರಡೂ ಬೈಕ್ ಜಖಂ ಆಗಿದೆ.
ಮೃತ ನಝೀರ್ ಕಕ್ಕಿಂಜೆಯಲ್ಲಿ ಕೆಲಸ ಮುಗಿಸಿ ತನ್ನ ಮನೆಗೆ ಸ್ನೇಹಿತನ ಜೊತೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.