';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: ಕೆಲವು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವಿಟ್ಲದಿಂದ ವರದಿಯಾಗಿದೆ.
ಮೃತಪಟ್ಟ ಯುವಕ ವಿಟ್ಲ ಸಮೀಪದ ದಾಸರಬೆಟ್ಟು ನಿವಾಸಿ ನಾಸಿರ್ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ನಾಸಿರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸಂತಾಪ ಸೂಚಿಸಿದ ಎಸ್‌ಡಿಪಿಐ:
ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಸ್‌ಡಿಪಿಐ ಕಾರ್ಯಕರ್ತ ನಾಸಿರ್ ದಾಸರಬೆಟ್ಟು ದೇರಳಕಟ್ಟೆ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದು, ಇವರ ನಿಧನಕ್ಕೆ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಎಸ್‌ಡಿಪಿಐ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದ ನಾಸಿರ್ ರವರು ಸಾಮಾಜಿಕ ಸೇವೆಯಲ್ಲಿಯೂ ಮುಂಚೂಣಿಯಲ್ಲಿದ್ದರು ಎನ್ನಲಾಗಿದೆ.