dtvkannada

ಬೆಳ್ತಂಗಡಿ: ಪತ್ನಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಹೃದಯಾಘಾತದಿಂದ ಬೆಳ್ತಂಗಡಿ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಬಹ್ರೇನ್‌ನಲ್ಲಿ ನಡೆದಿದೆ.

ಇಬ್ರಾಹಿಂ ನಾವೂರು (30) ಮೃತ ದುರ್ದೈವಿ. ಇವರು ನಿನ್ನೆ ಪತ್ನಿಯ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ಅಚಾನಕ್‌ ಆಗಿ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎನ್ನಲಾಗಿದೆ.

ಇವರು ಸುನ್ನತ್ ಕೆರೆಯ ಯುವತಿಯ ಜೊತೆ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಮಗು ಕೂಡಾ ಇದೆ.

By dtv

Leave a Reply

Your email address will not be published. Required fields are marked *

error: Content is protected !!