dtvkannada

ಸುಳ್ಯ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಚಾರ್ವಾಕ ಗ್ರಾಮದಲ್ಲಿನಡೆದ ಬಗ್ಗೆ ವರದಿಯಾಗಿದೆ.

ಮೃತಪಟ್ಟ ಮಹಿಳೆ ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ ( 37 ) ಎಂದು ತಿಳಿದು ಬಂದಿದೆ.

ಬೆಳ್ಳಾರೆಯ ಖಾಸಗಿ ಶಾಲೆಯಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಇವರಿಗೆ ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಷಾ ದೀರ್ಘಾವಧಿ ರಜೆ ಪಡೆದುಕೊಂಡು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.

ಆದರೆ ಆರೋಗ್ಯದ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು . ಆದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತರು ಒರ್ವ ಪುತ್ರಿ , ಹತ್ತು ತಿಂಗಳ ಗಂಡು ಮಗು ಹಾಗೂ ಪತಿಯನ್ನು ಬಂಧು ಬಳಗವನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!