ಮೂಡಿಗೆರೆ: ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿಕೊಂಡು ಬರುವ ವೇಳೆ ದಾರಿ ಮಧ್ಯೆ ಮರಕ್ಕೆ ಕಾರು ಢಿಕ್ಕಿ ಹೊಡೆದು, ತಂದೆ-ಮಗ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಭಾನುವಾರ ನಡೆದಿದೆ.
ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (46)ಮತ್ತು ಕಿರಣ್ (23) ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿಕೊಂಡು ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ತಾಲೂಕಿನ ಮುತ್ತಿಗೆಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ನರಸಿಂಹರಾಜ್, ಕಿರಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.