ಉಪ್ಪಿನಂಗಡಿ: ಗೋಳಿತೊಟ್ಟು ಇಲ್ಲಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ವಿಶ್ವ ಯೋಗದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜಯಂತಿ ಬಿ.ಎಂ.ರವರು ಯೋಗದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗವನ್ನು ಯೋಗದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ, ನಮ್ಮ ದೈನಂದಿನ ಜೀವನದಲ್ಲಿ ಜೀವನದ ಅವಿಭಾಜ್ಯ ಅಂಗವಾಗಿ ಪ್ರತಿದಿನವೂ ನಿಯಮಿತವಾಗಿ ಅಳವಡಿಸಿಕೊಂಡರೆ ನಮ್ಮ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಎಲ್ಲಾ ವಿಧದ ರೋಗಗಳಿಂದ ಮುಕ್ತಿ ಹೊಂದಬಹುದು ಮತ್ತು ನಮ್ಮ ಆಯುಷ್ಯವನ್ನು ವೃದ್ಧಿಗೊಳಿಸಲು ಸಾಧ್ಯವಾಗುತ್ತದೆಂದು ತಿಳಿಸಿ ಕಾರ್ಯಕ್ರಮಕ್ಕೆ ಸರ್ವರನ್ನೂ ಸ್ವಾಗತಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಗೋಪಾಲ ಗೌಡ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ನಮ್ಮ ದೇಶಕ್ಕಿದ್ದು, ಯೋಗವನ್ನು ನಮ್ಮ ಜೀವನದ ಭಾಗವಾಗಿ ಸ್ವೀಕರಿಸುವುದರೊಂದಿಗೆ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ನಾವು ದೈಹಿಕವಾಗಿ ಹಾಗೂ ಮಾನಸಿಕವಾಗಿ ನಾವು ಬಲಿಷ್ಠರಾಗುತ್ತೇವೆಂದು ತಿಳಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರಾದ ಶ್ರೀ ಜೋನ್ ಕೆ.ಪಿ.ರವರ ಮಾರ್ಗದರ್ಶನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 10 ರಿಂದ 12.30 ರೆಯ ತನಕ ಯೋಗಾಸನದ ವಿವಿಧ ಆಸನಗಳನ್ನು ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ ಸಹಕರಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ತೇಜಸ್ವಿ ಅಂಬೆಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಶ್ರೀಮತಿ ಸೀಮ ವಂದಿಸಿದರು.