';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ಬೇಳ್ಪಾಡಿ ಎಂಬಲ್ಲಿ ಮುಸ್ಲಿಂ ಕುಟುಂಬದ ಮನೆಗೆ ಬಿಜೆಪಿ ಕಾರ್ಯಕರ್ತರು ಅಕ್ರಮ ಪ್ರವೇಶ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.
ತೀವ್ರವಾದ ಹಲ್ಲೆಗೆ ಸಂತ್ರಸ್ತ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿಂದೆ ಸೋಡ್ತಿ ವಿಚಾರಕ್ಕೆ ಸಂಬಂಧಿಸಿ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು ಆದರೆ ಶುಕ್ರವಾರ ತಡರಾತ್ರಿ ಬಿಜೆಪಿ ಕಾರ್ಯಕರ್ತರ ತಂಡವೊಂದು ಮತ್ತೊಂದು ತಂಡದ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದು ಮನೆಯ ಕಿಟಕಿ ಗಾಜುಗಳನ್ನು ಹೊಡೆದು ಹಾಕಿ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಕಡಬ ಪೋಲಿಸ್ ಠಾಣೆಯಲ್ಲಿ ಸಂತ್ರಸ್ತೆ ಮತ್ತು ಅವರ ಪತಿ ದೂರು ನೀಡಿದ್ದು, ಬಿಜೆಪಿ ಕಾರ್ಯಕರ್ತರಾದ ಬಾಸ್ಕರ,ಲಿಖಿತ್,ಜಯರಾಮ,ಉದಯ,ರಾಜೇಶ್ ಎಂಬವರ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.