ಉಪ್ಪಿನಂಗಡಿ: ಅಪರಿಚಿತ ವೃದ್ದನೋರ್ವನಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಪರಾರಿಯಾದ ಘಟನೆ ಉಪ್ಪಿನಂಗಡಿ ಬಸ್ಸು ನಿಲ್ದಾಣದ ಬಳಿ ನಿನ್ನೆ ರಾತ್ರಿ ನಡೆದಿದೆ.
ರಾತ್ರಿ 10 ಗಂಟೆಯ ಹೊತ್ತಿಗೆ ಅಪರಿಚಿತ ವೃದ್ದನೋರ್ವ ರಸ್ತೆ ದಾಟುತ್ತಿದ್ದಾಗ ಅತೀ ವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದು ಢಿಕ್ಕಿಯಾದ ರಭಸಕ್ಕೆ ವ್ಯಕ್ತಿ ಗಂಭೀರ ಗಾಯಗೊಂಡಿದ್ದರು.
ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ರಾತ್ರಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೇ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ.
ಬೈಕ್ ಡಿಕ್ಕಿ ಹೊಡೆದು ಸವಾರ ಬೈಕ್ ನಿಲ್ಲಿಸದೇ ಪರಾರಿಯಾಗಿದ್ದಾನೆ.