ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.
ಆದ್ದರಿಂದ ಮತ್ತೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೆಲವು ಕಡೆ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ನಗರದಲ್ಲಿ ಟ್ರಾಫಿಕ್ ಜಾಂ ಕೂಡಾ ಕಂಡುಬರುತ್ತಿದೆ. ಈ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.