dtvkannada

'; } else { echo "Sorry! You are Blocked from seeing the Ads"; } ?>

ಚೆನ್ನೈ: ಇಲ್ಲಿಗೆ ಸಮೀಪದ ಹೆದ್ದಾರಿಯಲ್ಲಿ ಟ್ರಕ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಪ್ರಯಾಣಿಕರು ಮೃತಪಟ್ಟು 10 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಚಿದಂಬರಂಗೆ ತೆರಳುತ್ತಿದ್ದ ಬಸ್ ಚೆನ್ನೈ-ತಿರುಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಥುರಾಂತಕಂ ಬಳಿ ಕಂಟೈನರ್ ಟ್ರಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಚೆಂಗಲ್‌ಪೇಟ್ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ, ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಚೆಂಗಲ್ಪಟ್ಟುವಿನಲ್ಲಿ ನಡೆದ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ನೋವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಗಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ.

— TOIChennai (@TOIChennai) July 8, 2022

ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯಪಾಲ ಆರ್ ಎನ್ ರವಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!