dtvkannada

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಜಿಲ್ಲೆಯಲ್ಲಿ ಜು.14ರ ವರೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಈಗಾಗಲೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ದಿನಪೂರ್ತಿ ಭಾರೀ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿಯೂ ಮಳೆ ಪ್ರಕೋಪ ಮುಂದುವರಿದಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!