ಮಂಗಳೂರು: ದ.ಕ ಜಿಲ್ಲೆಗೆ ಮುಖ್ಯಮಂತ್ರಿಯ ಭೇಟಿಯ ಬೆನ್ನಲ್ಲೇ ಮುಸ್ಲಿಂ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದು ಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಸುರತ್ಕಲ್ ಸಮೀಪದ ಮಂಗಳಪೇಟೆ ನಿವಾಸಿ ಫಾಝಿಲ್ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ನಾಳೆ ತನ್ನ ಹುಟ್ಟು ಹಬ್ಬವನ್ನು ಆಚರಿಸಬೇಕಾಗಿದ್ದ ಫಾಝಿಲ್ ಚಪ್ಪಲಿ ಖರೀದಿಗೆಂದು ಸುರತ್ಕಲ್ ಪೇಟೆಗೆ ಬಂದಿದ್ದು ಸ್ನೇಹಿತನ ಬಳಿ ಅಂಗಡಿ ಮುಂದೆ ಮಾತುಕತೆಯಲ್ಲಿ ತೊಡಗಿದ್ದ ಆವಾಗಲೇ ಏಕಾ ಏಕಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಫಾಝಿಲ್ ನ ಮೇಲೆ ದಾಳಿ ನಡೆಸಿದ್ದು ತೀವ್ರ ರಕ್ತಸ್ರಾವದಿಂದ ಫಾಝಿಲ್ ಕೊನೆಯುಸಿರೆಳೆದಿದ್ದಾನೆ.
ಘಟನೆ ಸಂಬಂಧಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಹಲ್ಲೆಯ ಸಂದರ್ಭದಲ್ಲಿ ಪ್ರತ್ಯಕ್ಷದರ್ಶಿಗಳನ್ನು ತನಿಖೆಗೆ ಒಳಪಡಿಸುತ್ತಿದ್ದೇವೆ, ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುವುದು ಇನ್ನೂ ತಿಳಿದಿಲ್ಲ ಎಂದು ಅವರು ಹೇಳಿದರು.
ವೀಡಿಯೋ ವೀಕ್ಷಿಸಿ 👇👇
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು,
ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ವ್ಯಾಪ್ತಿಯಲ್ಲಿ ಜುಲೈ 30 ರ ವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.