ಕರಾವಳಿಯಲ್ಲಿ ಮುಂದುವರಿದ ವರುಣನಾರ್ಭಟ; ನಾಳೆ (ಆಗಸ್ಟ್ 3) ಕಡಬ, ಸುಳ್ಯ ತಾಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಕಡಬ: ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರೀ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಭೀಕರ ಮಳೆಗೆ ಎರಡು ಮಕ್ಕಳು ಮೃತಪಟ್ಟಿದ್ದಾರೆ.
ನದಿ,ಹಳ್ಳಗಳು ಮಿತಿ ಮೀರಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್ 3) ರಂದು ಕಡಬ ಮತ್ತು ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.